
ಕಾರ್ಕಳ, ಡಿ.21:ಅಜೆಕಾರಿನ ದಿಲೀಪ್ ಎಂಬುವರ ತೋಟದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿನ ಕುರ್ಪಾಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಜಾರ್ಖಂಡ್ ಮೂಲದ ಸುಶೀಲ್ ಭಗತ್ (23) ಎಂಬಾತ ನೇಣಿಗೆ ಶರಣಾದ ಯುವಕ. ಆತ ತನ್ನ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಶನಿವಾರ ಕೆಲಸ ಮುಗಿಸಿ ರಾತ್ರಿ ವೇಳೆ ಸಯ್ಯದ್ ಇಸಾಕ್ ಅವರ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
