ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಬಂಧನದಲ್ಲಿರುವ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ.
ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆ ಅ.20 ರಂದು ಮುಂಜಾನೆ ನಿದ್ದೆಯಲ್ಲಿರುವಾಗ ಉಸಿರುಗಟ್ಟಿಸಿ ಅಮಾನುಷವಾಗಿ ಹತ್ಯೆಗೈದಿದ್ದರು. ಬಳಿಕ ಮೃತನ 5ನೇ ದಿನದ ಧೂಳಫ್ಪ ಕಾರ್ಯಕ್ರಮದಲ್ಲಿ ಪ್ರತಿಮಾ ತನ್ನ ಗಂಡನ ಕೊಲೆಯ ರಹಸ್ಯವನ್ನು ತನ್ನ ಅಣ್ಣ ಸಂದೀಪ್ ಪೂಜಾರಿ ಬಳಿ ಹೇಳಿಕೊಂಡಿದ್ದಳು. ಬಳಿಕ ಪೊಲೀಸರು ಪ್ರತಿಮಾ ಹಾಗೂ ದಿಲೀಪ್ ಹೆಗ್ಡೆಯನ್ನು ಬಂಧಿಸಿ ಕೊಲೆ ಪ್ರಕರಣ ಮಾಹಿತಿ ಬಾಯಿಬಿಡಿಸಿದ್ದರು.ಕಳೆದ ಅಕ್ಟೋಬರ್ 25ರಂದು ಆರೋಪಿ ಪ್ರತಿಮಾಳಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.ಬಳಿಕ ದಿಲೀಪ್ ಹೆಗ್ಡೆಯನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ಮತ್ತೆ ಅ.28ರಂದು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ಇವರಿಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಇಬ್ಬರನ್ನೂ ಮತ್ತೆ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.