ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ನಡೆಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅರೇಬಿಕ್ ಪಠಣ ಸ್ಪರ್ಧೆಯಲ್ಲಿ ಅಜೆಕಾರು ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ಹಾಜಿರಾ ಅರ್ಹ ಇವಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಸಾಧಕ ವಿದ್ಯಾರ್ಥಿನಿಯನ್ನು ಸಂಸ್ಥೆಯ ಮುಖ್ಯ ಶಿಕ್ಷಕಿ ಸಿಸ್ಟೆರ್ ಪ್ರೆಸಿಲ್ಲ ಪುಟಡೋ ಹಾಗೂ ಶಿಕ್ಷಕ, ಶಿಕ್ಷಕೇತರ ವರ್ಗದವರು ಅಭಿನಂದಿಸಿದ್ದಾರೆ.