Share this news

ಕಾರ್ಕಳ: ತಾಲೂಕಿನ ಅಜೆಕಾರಿನಲ್ಲಿ ಕಳೆದ9 ತಿಂಗಳ ಹಿಂದೆ ನಕಲಿ ಸಾಧುವಿನ ವೇಷದಲ್ಲಿ ಬಂದು ಎಲೆಕ್ಟ್ರಾನಿಕ್ಸ್ ಅಂಗಡಿ ಮಾಲೀಕರೊಬ್ಬರ ಚಿನ್ನಾಭರಣವನ್ನು ಎಗರಿಸಿದ್ದ ಅಸಲಿ ಕಳ್ಳನನ್ನು ಪೊಲೀಸರು ಸೆರೆ ಹಿಡಿದು, ಆತನಿಂದ ಕಳವುಗೈದ ಉಂಗುರವನ್ನು ವಶಪಡಿಸಿಕೊಂಡಿದ್ದಾರೆ.
ಮಧ್ಯಪ್ರದೇಶದ ಕಾರ್ಗೋನ್ ಜಿಲ್ಲೆಯ ಕರಣ್ ನಾಥ್ ಬಂಧಿತ ಆರೋಪಿ.

ಕಳೆದ ಮೇ.9 ರಂದು ಅಜೆಕಾರಿನ ದುರ್ಗಾ ಎಲೆಕ್ಟ್ರಾನಿಕ್ಸ್ ಅಂಗಡಿಗೆ ಇಬ್ಬರು ವ್ಯಕ್ತಿಗಳು ಸಾಧುವಿನ ವೇಷದಲ್ಲಿ ಬಂದು ಆಶೀರ್ವಾದ ಮಾಡುವ ನೆಪದಲ್ಲಿ ಗಮನ ಬೇರೆಡೆ ಸೆಳೆದು ಅಂಗಡಿ ಮಾಲೀಕ ರಂಜಿತ್ ಶೆಟ್ಟಿ ಅವರ ಬೆರಳಿನಲ್ಲಿದ್ದ ಚಿನ್ನದ ಉಂಗುರ ಹಾಗೂ 2 ಸಾವಿರ ರೂ. ಹಣವನ್ನು ಎಗರಿಸಿ ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಉಪವಿಭಾಗದ ಎಎಸ್‌ಪಿ ಡಾ. ಹರ್ಷಾಪ್ರಿಯಂವದಾ ಹಾಗೂ ವೃತ್ತ ನಿರೀಕ್ಷಕ ಮಂಜಪ್ಪ ಡಿ. ಆ‌ರ್. ಅವರ ನೇತೃತ್ವದಲ್ಲಿ ಅಜೆಕಾರು ಪೊಲೀಸ್ ಠಾಣೆಯ ಪಿ.ಎಸ್.ಐ ಮಹೇಶ್ ಟಿ. ಎಂ. ತಂಡವು ಕಾರ್ಯಾಚರಣೆ ನಡೆಸಿತ್ತು. ಸಹಾಯಕ ಪೊಲೀಸ್‌ ಉಪನಿರೀಕ್ಷಕ ಲಕ್ಷ್ಮಣ್ ಪ್ರಭು, ಹೆಚ್‌.ಸಿ. ಸತೀಶ ಬೆಳ್ಳೆ ಅಶೋಕ ದೇವಾಡಿಗ ತೆಳ್ಳಾರ್, ಪ್ರದೀಪ ಶೆಟ್ಟಿ, ನಾಗೇಶ ಮಿಯ್ಯಾರು, ಜಿಲ್ಲಾ ಪೊಲೀಸ್‌ ಕಚೇರಿಯ ತಾಂತ್ರಿಕ ವಿಭಾಗದ ದಿನೇಶ್‌ ಹಾಗೂ ನಿತಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *