ಕಾರ್ಕಳ: ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಸ್ಕೂಲ್ ಬಸ್ಸಿಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಅಜೆಕಾರಿನ ನೂಜಿಗುರಿ ಎಂಬಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಮುನಿಯಾಲಿನಿಂದ ಕಾರ್ಕಳಕ್ಕೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನೂಜಿಗುರಿ ಎಂಬಲ್ಲಿ ಮಕ್ಕಳನ್ನು ಹತ್ತಿಸಲು ನಿಲ್ಲಿಸಿದಾಗ ವೇಗವಾಗಿ ಬಂದ ಸ್ಕೂಟರ್ ಸವಾರ ಪ್ರವೀಣ್ ಎಂಬವರು ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ.ಬಸ್ ಚಾಲಕ ಬಸ್ಸನ್ನು ಯಾವುದೇ ಸೂಚನೆ ನೀಡದೇ ಹಠಾತ್ತಾಗಿ ರಸ್ತೆಯಲ್ಲೇ ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ.
ಅಜೆಕಾರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.