ಕಾರ್ಕಳ: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಬಂದ ಲಾರಿ ಬೈಕಿಗೆ ಡಿಕ್ಕಿಯಾಗಿದ್ದು ಬೈಕ್ ಸವಾರ ಹಾಗೂ ಸಹ ಸವಾರ ಮಹಮ್ಮದ್ ಅರೀಫ್ ಹಾಗೂ ಮಹಮ್ಮದ್ ಅದಿಲ್ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗಿದ್ದು, ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
