ಕಾರ್ಕಳ : ಶಾಸಕ ವಿ ಸುನೀಲ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಶಕ್ತಿ ಕೇಂದ್ರ ಮರ್ಣೆ- ಅಜೆಕಾರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ಕೇಂದ್ರ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ಆ. 17 ರಂದು ಅಜೆಕಾರು ಶ್ರೀ ರಾಮ ಮಂದಿರದಲ್ಲಿ ನಡೆಯಿತು.
ಶಾಸಕ ವಿ.ಸುನಿಲ್ ಕುಮಾರ್, ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಅಜೆಕಾರು ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾ ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ,ಅಜೆಕಾರು ವ್ಯವಸಾಯಿಕ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಾಂತಿರಾಜ್ ಜೈನ್,ಮರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾವತಿ ನಾಯಕ್, ದೊಂಡೇರಂಗಡಿ ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ, ಕೆಎಂಸಿ ಮಣಿಪಾಲ ರಕ್ತನಿಧಿ ಕೇಂದ್ರದ ವೈದ್ಯ ಡಾ. ಕಾರ್ತಿಕ್ ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ ಮತ್ತಿತರರು ಉಪಸ್ಥಿತರಿದ್ದರು.
ರಕ್ತದಾನ ಶಿಬಿರದಲ್ಲಿ 79 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಈ ಯಶಸ್ವಿ ರಕ್ತದಾನ ಶಿಬಿರಕ್ಕೆ ಸಹಕರಿಸಿದ ರಕ್ತದಾನಿಗಳಿಗೆ ಸಂಘಟಕರು ಕೃತಜ್ಞತೆ ಸಲ್ಲಿಸಿದ್ದಾರೆ.