ಉಡುಪಿ,ಅ.04: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಸೆ .27 ರಂದು ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಎಂಬಾತನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಲಭಿಸಿದ್ದು, ಹತ್ಯೆಗೆ ಸಂಚು ರೂಪಿಸಿದ್ದ ಮಹಿಳೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭಾನಾ(27) ಎಂಬಾಕೆ ಬಂಧಿತ ಆರೋಪಿ.ಈಕೆ ಸೈಫುದ್ದೀನ್ ಕೊಲೆ ಆರೋಪಿಯಾಗಿ ಈಗಾಗಲೇ ಬಂಧನದಲ್ಲಿರುವ ಬಡಗಬೆಟ್ಟು ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ ಪತ್ನಿ ಯಾಗಿದ್ದು,ಯಾವ ಕಾರಣಕ್ಕಾಗಿ ಕೊಲೆಗೆ ಸ್ಕೆಚ್ ಹಾಕಿದ್ದಾಳೆ ಎನ್ನುವ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸೈಫ್ ಹತ್ಯೆ ಪ್ರಕರಣದ ಆರೋಪಿಗಳಾದ ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್, ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು ಜೈಲಿನಲ್ಲಿದ್ದು, ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್‌ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್ ಸೈಫ್‌ನ ಆತ್ಮೀಯನಾಗಿದ್ದ.