
ಕಾರ್ಕಳ,ಮೇ.18: ವಿಪರೀತ ಮದ್ಯಪಾನ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಲ್ಲುಕೋರೆ ಕಾರ್ಮಿಕ ಮಣಿ(36) ಎಂಬವರು ಮೃತಪಟ್ಟ ಕಾರ್ಮಿಕ. ಮಣಿ ಮಿಯ್ಯಾರಿನ ಕಲ್ಲುಕೋರೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಪ್ರತಿನಿತ್ಯ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಮದ್ಯಪಾನದ ಚಟದಿಂದ ಅವರ ಲಿವರ್ ಆರೋಗ್ಯ ಕೆಟ್ಟು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ವೈದ್ಯಾದಿಕಾರಿಯವರು ಮಣಿ ಯನ್ನು ಪರೀಕ್ಷಿಸಿ ಲಿವರ್ ಸಂಪೂರ್ಣ ಹಾಳಾಗಿರುವುದಾಗಿ ತಿಳಿಸಿದ್ದರೂ ವಿಪರೀತ ಮದ್ಯಪಾನ ಮಾಡುತ್ತಿದ್ದು ನನಗೆ ಬದುಕಲು ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಏ. 2 ರಂದು ವಿಷ ಸೇವಿಸಿ ಮಂಗಳೂರು ಕಣಚೂರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಮತ್ತೆ ಕುಡಿಯುವ ಆಭ್ಯಾಸವನ್ನು ಮುಂದುವರಿಸಿದ ಮಣಿಯವರು ಮೇ 14ರಂದು 5 ಗಂಟೆಗೆ ಮನೆಯಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
