Share this news

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವು ಈಗಾಗಲೇ ಮುಗಿದಿದ್ದು, ಮುಂದಿನ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು ಮೇ 29ರಂದು ರಾಜ್ಯದ ಎಲ್ಲಾ ಶಾಲೆಗಳು ಪುನರಾರಂಭಗೊಳ್ಳಲಿವೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮೇ 29ರಂದು ತೆರೆಯಲಿವೆ ಎಂದಿದ್ದಾರೆ.
ಈ ಆದೇಶದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳನ್ನು ನಿಗದಿ ಪಡಿಸಲಾಗಿದ್ದು, ಮಕ್ಕಳು ಮತ್ತು ಶಿಕ್ಷಕರಿಗೆ ಒಟ್ಟು 121 ದಿನಗಳ ಶೈಕ್ಷಣಿಕ ರಜೆ ಸಿಗಲಿದೆ.

ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡAತೆ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಿದೆ.

ಆದರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತೀವೃ ಬರಗಾಲ ಕಾಡುತ್ತಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಒಂದುವೇಳೆ ಸಕಾಲದಲ್ಲಿ ಮಳೆಯಾಗದಿದ್ದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು ಇದರಿಂದ ಶಾಲೆ ಪುನರಾರಂಭ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

 

 

 

 

 

 

 

 

 

 

Leave a Reply

Your email address will not be published. Required fields are marked *