ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಬೆಳಗ್ಗೆ 10.30ಕ್ಕೆ ಕೋರ್ಟ್ ದೂರಿನ ಕುರಿತು ವಿಚಾರಣೆ ನಡೆಸಲಾಗಿದ್ದು, ಲೋಕಸಭಾ ಚುನಾವಣೆ ವೇಳೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತ ನೀಡಿದ್ದು, ಸಿ.ಎಂ. ಹುದ್ದೆಗೆ 2500 ಕೋಟಿ , ಮಂತ್ರಿಗಳ ಹುದ್ದೆ 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ಕೊಟ್ಟು ಹುದ್ದೆ ಪಡೆಯಲಾಗಿದೆ ಎಂದು ಆರೋಪಿಸಿದ್ದರು.
ಸಧ್ಯ ಈ ಪ್ರಕರಣದಲ್ಲಿ ಸಿಎಂ ಹಾಗೂ ಡಿಸಿಎಂ ಗೆ ರಿಲೀಫ್ ಸಿಕ್ಕಂತಾಗಿದೆ