
ಕಾರ್ಕಳ, ಫೆ.25: ಅಂಬೇಡ್ಕರ್ ಸಭಾಭವನದ ಉದ್ಘಾಟನೆಗೆ ಮುಖ್ಯಮಂತ್ರಿ ಬರುತ್ತಿದ್ದು, ಈ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರ್ ನಲ್ಲಿ ಸಂಸದರು ಹಾಗೂ ಸ್ಥಳೀಯ ಶಾಸಕರ ಫೋಟೋ ಕೈ ಬಿಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.
ಅಂದಿನ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಅವರು
ಕಾರ್ಕಳದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ಮಂಜೂರುಗೊಳಿಸಿ ಅನುದಾನ ಬಿಡುಗಡೆ ಮಾಡಿದ್ದು, ಇದೀಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರನ್ನು ಕಡೆಗಣಿಸಿರುವುದು ಖಂಡನೀಯ, ಜಿಲ್ಲಾಡಳಿತ ಈ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು ಮಾತ್ರವಲ್ಲದೇ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿತ್ತು.
ಈ ವಿವಾದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಬ್ಯಾನರ್ ನಲ್ಲಿ ಶಾಸಕರ ಭಾವಚಿತ್ರ ಹಾಕಿ ಗೊಂದಲಕ್ಕೆ ತೆರೆ ಎಳೆದಿದೆ.


.
.
.
.
.
.
.
.
.
.
