ಬೆಂಗಳೂರು,: ಸಿಎಂ ಸಿದ್ದರಾಮಯ್ಯ ನೇತೃತ್ವ ಸರ್ಕಾರದ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿAದ “ಮಂಥ್ಲಿ ಮನಿ” ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ವರ್ಗಾವಣೆ, ಪ್ರಮೋಷನ್ ಗೆ ಅಧಿಕಾರಿಗಳು ಲಕ್ಷ ಲಕ್ಷ ,ಕೋಟಿ ಕೋಟಿ ಲಂಚ ನೀಡಿದ್ದಾರೆ. ಹೀಗಾಗಿ ಅಧಿಕಾರಿಗಳು ಸನ್ನದುದಾರರಿಂದ ಮನಸೋ ಇಚ್ಚೆ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಲಂಚವತಾರದಿAದ ಅಂತರಾಜ್ಯ ಮದ್ಯ, ನಕಲಿ ಮದ್ಯ ಹೆಚ್ಚಳವಾಗಿದೆ. ಅಬಕಾರಿ ಇಲಾಖೆಗೆ ಮಂತ್ರಿ ಬೇಕಾಗಿಲ್ಲ. ಹಣಕಾಸು ಸಚಿವರಿಗೆ ಅಬಕಾರಿ ಇಲಾಖೆ ಜವಾಬ್ದಾರಿಗೆ ವಹಿಸುಕೊಳ್ಳುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ರಾಜ್ಯದ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದು, ನವೆಂಬರ್20 ರಾಜ್ಯವ್ಯಾಪ್ತಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಅಲ್ಲದೇ ಇಲಾಖೆಯ ಭ್ರಷ್ಟಾಚಾರಕ್ಕೆ ಬೇಸತ್ತು ಮದ್ಯದಂಗಡಿಯವರು ರಾಜಭವನ ಮೆಟ್ಟಿಲೇರಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಏನು ಭ್ರಷ್ಟಾಚಾರ ಆಗಿದೆ ಎಂದು ನನಗೆ ಗೊತ್ತಿಲ್ಲ. ಅಬಕಾರಿ ಇಲಾಖೆಯಲ್ಲಿ ಯಾವ ಭ್ರಷ್ಟಾಚಾರ ಆಗಿದೆ? ಆರೋಪ ಮಾಡಿದ್ದೆಲ್ಲವೂ ನಿಜನಾ? ನಮ್ಮ ಇಲಾಖೆಯಲ್ಲಿ ಯಾರು ಕಿರುಕುಳ ನೀಡಿದ್ದಾರೆಂದು ಹೇಳಲಿ. ಲಂಚ ಪಡೆದ ಅಧಿಖಾರಿಗಳ ಪಟ್ಟಿಯನ್ನು ನನಗೆ ಕೊಡಲಿ ಎಂದು ಹೇಳಿದ್ದಾರೆ.