
ಬೆಂಗಳೂರು, ಜೂ. 13: ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಫಂಡಿಂಗ್ ಆರೋಪದಲ್ಲಿ ಅಮೆರಿಕಾ ಮೂಲದ ಟಿಟಿಐ (ದಿ ತಿಮೋತಿ ಇನಿಶಿಯೇಟಿವ್) ಕ್ರಿಶ್ಚಿಯನ್ ಮಿಷಿನರಿ ಸಂಸ್ಥೆ ಹಾಗೂ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಯುಎಪಿಎ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಒಳಸಂಚು, ವಂಚನೆ ಮತ್ತು ಸುಳ್ಳು ದಾಖಲೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರಿನ ಜೋನಾಥನ್ ಎಸ್ ರಾಜನ್, ಮೈಸೂರಿನ ಸುಪ್ರೀಂ ಜಾಯ್, ಮಿಕಾ ಮಾರ್ಕ್, ಅಜಿತ್ ವರ್ಗೀಸ್ ಮಥಾಯಿ, ಛತ್ತೀಸ್ ಘಟ್ದ ವರ್ಗೀಸ್ ಚಾಕೊ, ಅಸ್ಸಾಂನ ಬಬ್ಲು ಕುರ್ಮಿ ಹಾಗೂ ಟಿಟಿಐ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಳೆದ ಏಪ್ರಿಲ್‌ನಲ್ಲಿ ಇಡಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ 95 ಕೋಟಿ ರೂಪಾಯಿಗೂ ಅಧಿಕ ಅಕ್ರಮ ವಿದೇಶಿ ಹಣ ಬಳಕೆಯಾಗಿರುವುದು ಬೆಳಕಿಗೆ ಬಂದಿದ್ದು, ಸಂತೋಷ್ ಕುಮಾರ್ ಎಂಬ ಸುಳ್ಳು ಹೆಸರಿನ ಯುಎಸ್‌ಎ ಟ್ರೂಯಿಸ್ಟ್ ಬ್ಯಾಂಕ್‌ನ ಸಾವಿರಕ್ಕೂ ಹೆಚ್ಚು ವಿದೇಶಿ ಡೆಬಿಟ್ ಕಾರ್ಡ್‌ಗಳನ್ನು ಭಾರತದಲ್ಲಿ ಅಕ್ರಮವಾಗಿ ವಿತರಿಸಿ ಹಣ ಡ್ರಾ ಮಾಡಿರುವುದು ಪತ್ತೆಯಾಗಿತ್ತು.
ಸಬ್ ಯಲ್ಲಿ

.
.
.
.
.
.
.
.
.
.
.
.
.
.
.
.
.
.
.
.
