ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್ ಐ ಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಐವರು ವೈದ್ಯರು, ಲ್ಯಾಗ್ ಎಕ್ಸ್ಪರ್ಟ್ ಕಂಪನಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ ರಚನೆ ಮಾಡುವ ಸಾಧ್ಯತೆ ಇದೆ.
ಪಿಪಿಇ ಕಿಟ್, N-95 ಮಾಸ್ಕ್ ಖರೀಯಲ್ಲಿ ಅವ್ಯವಹಾರವಾಗಿರುವುದು ಮೇಲ್ನೋಟಕ್ಕೆ ಕಂಡುಬAದ ಹಿನ್ನೆಲೆಯಲ್ಲಿ ಹಾಗೂ ನಿಯಮ ಬಾಹಿರವಾಗಿ ಹೆಚ್ಚುವರಿ ಕಿಟ್ ಖರೀದಿಗೆ ಆದೇಶ, ಕೋಟ್ಯಂತರ ಹಣ ಸಂದಾಯದ ಬಳಿಕವೂ ಕಿಟ್ ನೀಡಿಲ್ಲ. ಹಾಗೇ ಷಡ್ಯಂತ್ರ ರೂಪಿಸಿ ಜನರ ಹಣ ದುರ್ಬಳಕೆ ಮಾಡಿದ್ದಾರೆ ಎನ್ನುವ ಆರೋಪದಡಿ ಡಾ.ಗಿರೀಶ್, ಜಿ.ಪಿ.ರಘು, .ಮುನಿರಾಜ್, ಲಾಜ್ ಎಕ್ಸ್ಪೋರ್ಟ್, ಪ್ರೂಡೆಂಟ್ ಮ್ಯಾನೆಜ್‌ಮೆಂಟ್ ಸಲೂಷನ್ಸ್ ಕಂಪನಿ ಸೇರಿದಂತೆ ಕೆಲ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.