Share this news

 

ಮಂಗಳೂರು, ಅ. 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ ಬಲವಂತದ ಕ್ರಮ ಬೇಡ ಎಂದು ನ್ಯಾಯಾಲಯ ತಿಳಿಸಿದ್ದು, ವಿಚಾರಣೆಯನ್ನು ಅ.29ಕ್ಕೆ ಕೋರ್ಟ್​ ಮುಂದೂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್​ ಭಟ್​ ಭಾಷಣ ಮಾಡಿದ್ದರು. ಅವರು ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ಎಂಬುವರು ನೀಡಿದ್ದ ದೂರಿನ ಅನ್ವಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಿಎನ್ಎಸ್ 79, 196, 299, 302, 3(5) ಅಡಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅ. 30ರಂದು ವಿಚಾರಣೆಗೆ ಹಾಜರಾಗುವಂತೆ ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಇದನ್ನ ಪ್ರಶ್ನಿಸಿ ಪ್ರಭಾಕರ್​ ಭಟ್​ ಕೋರ್ಟ್​ ಮೊರೆ ಹೋಗಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *