Share this news

ಮೈಸೂರು: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಮೈಸೂರು ತಾಲೂಕಿನ ಹಿನಕಲ್​ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ‌ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪ ಕೇಳಿಬಂದಿದೆ.

ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್​ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

 

 

 

    

                        

                          

                        

                       

Leave a Reply

Your email address will not be published. Required fields are marked *