ಬೆಂಗಳೂರು: ರಾಮಗಡ್ ಮಿನರಲ್ಸ್ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅನುಮೋದಿಸಿದ್ದ ಸಿದ್ದರಾಮಯ್ಯ ಇದಕ್ಕಾಗಿ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪದ ಕುರಿತು ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
ಗಣಿ ಗುತ್ತಿಗೆಯ ಪರವಾನಗಿ ನವೀಕರಣದಲ್ಲಿ ಅಕ್ರಮ ನಡೆದಿದ್ದು, ಒಟ್ಟಾರೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದೆ, ಹೀಗಾಗಿ ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡಬೇಕುಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲರಿಗೆ ಮನವಿ ಮಾಡಿರುವುದು ಬಹಿರಂಗವಾಗಿದೆ.
ತಮ್ಮ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನ ಹಂಚಿಕೆಯಾಗಿದ್ದ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಬೆನ್ನಲ್ಲೇ 8 ಗಣಿ ಗುತ್ತಿಗೆಗಳ ನವೀಕರಣದಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ.
ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರುವ ಸಂಬಂಧ ದಾಖಲೆ ಸಲ್ಲಿಸಲು ರಾಜ್ಯಪಾಲರ ಭೇಟಿಗೆ ಅವಕಾಶ ನೀಡಬೇಕು ಎಂದು 2025ರ ಮಾರ್ಚ್ ಮಾರ್ಚ್ 4ರಂದೇ ರಾಜ್ಯಪಾಲರ ಸಚಿವಾಲಯಕ್ಕೆ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
ಮುಡಾ ಪ್ರಕರಣದಲ್ಲಿ ಈಗಾಗಲೇ ಕ್ಲೀನ್ ಚಿಟ್ ಪಡೆದ ಸಿಎಂಗೆ ಇಡಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಕಿರಿಕಿರಿಯಾಗಿದ್ದು, ಈ ಪ್ರಕರಣದಿಂದ ಮತ್ತೆ ಸಿಎಂ ಗೆ ಹೊಸ ತಲೆನೋವು ತಂದಿದೆ.