Share this news

ಮಂಗಳೂರು :ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಭಾಕರ ಭಟ್ ಅವರು ಮೇ 12 ರಂದು ದಕ್ಚಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕುರಿತು ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದಕ್ಷಿಣ ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲ್ಲೇ ರಾತ್ರೋರಾತ್ರಿ ನೂತನ ಎಸ್‌ಪಿ ಡಾ.ಅರುಣ್.ಕೆ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಈ ಕ್ರಮದ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಗುಂಪುಕಟ್ಟಿಕೊAಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 

 

 

 

 

Leave a Reply

Your email address will not be published. Required fields are marked *