

ಕಾರ್ಕಳ, ಸೆ.21: ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್ ಅವರ ವಿರುದ್ಧ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ. ತಾಲೂಕು ಕಚೇರಿಯ ಮಹಿಳಾ ಸಿಬ್ಬಂದಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳೂ ಸೇರಿ 6 ಜನ ಮಹಿಳಾ ಸಿಬ್ಬಂದಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಕಚೇರಿ ಕಡತಗಳ ಕುರಿತು ವಿವರಣೆ ಕೇಳಲು ಮಹಿಳಾ ಸಿಬ್ಬಂದಿಗಳನ್ನು ತಹಶೀಲ್ದಾರ್ ಅವರು ತನ್ನ ಕಚೇರಿಗೆ ಕರೆಸಿಕೊಂಡು ಅವರ ಜೊತೆ ಅಸಭ್ಯವಾಗಿ,ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಸಿಬ್ಬಂದಿಗಳು ಗಂಭೀರ ಆರೋಪ ಮಾಡಿದ್ದಾರೆ.
ಈ ಪ್ರಕರಣದ ಬೆನ್ನಲ್ಲೇ ತಹಶೀಲ್ದಾರ್ ಪ್ರದೀಪ್ ಅವರು ದಿಢೀರ್ ರಜೆ ಮೇಲೆ ತೆರಳಿದ್ದಾರೆ ಎನ್ನಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.





.
.
.
.
.
.
.
.
.
.
.
.
.
.
.
.
.
.
.
.
