ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಎನ್ ಐಎ ಅಧಿಕಾರಿಗಳ ತಂಡವು ಬೆಂಗಳೂರು ಮಾತ್ರವಲ್ಲದೇ ಕೊಯಮತ್ತೂರಿನ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.