

ಬೆಂಗಳೂರು, ಅ.18: ಉಗ್ರ ಸಂಘನೆಗಳೊಂದಿಗೆ ನಂಟು ಹೊಂದಿದ ಆರೋಪ ಹಿನ್ನೆಲೆ ಕಲಬುರಗಿಯಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಆರೋಪಿಯಾಗಿದ್ದು, ಈತ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಸಹೋದರನೊಂದಿಗೆ ಚಿನ್ನಾಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಮ್ತಾಜ್ವುಲ್ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಲಷ್ಕರ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ. ಮೆಸೇಜ್ ಮೂಲಕ ಲಷ್ಕರ್ ಸಂಘಟನೆಯೊಂದಿಗೆ ಹಲವು ಮಹತ್ವದ ವಿಷಯಗಳನ್ನು ಹಂಚಿಕೊAಡಿದ್ದ ಎಂಬ ಮಾಹಿತಿ ಲಭಿಸಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೆಲ ದಿನಗಳ ಹಿಂದೆ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಯುವಕನನ್ನು ಬಂಧಿಸಲಾಗಿತ್ತು. ಈ ನಡುವೆಯೇ ಕಲಬುರಗಿಯಲ್ಲಿ ಇದೀಗ ಮತ್ತೊಬ್ಬ ಶಂಕಿತ ವ್ಯಕ್ತಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ.






.
.
.
.
.
.
.
.
.
.
.
.
.
.
.
.
.
.
.
.
