

ಬೀದರ್, ಅ. 05: ಉಗ್ರರ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಏಣಕೂರು ಗ್ರಾಮದ ವಿಶಾಲ್ ಮೇತ್ರೆ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಪಾಕಿಸ್ತಾನ ಮೂಲದ ಉಗ್ರರ ಜಾಲದ ಜೊತೆ ವಿಶಾಲ್ ಮೇತ್ರೆ ನಂಟು ಹೊಂದಿದ್ದು, ವಾಟ್ಸಾಪ್, ಇನ್ಸ್ಟಾಗ್ರಾಮ್ ಮೂಲಕ ಪಾಕ್ ಮೂಲದ ಶಹಜಾದ್ ಭಟ್ಟಿ ರಾಣಾ ಹುನೇನ್ ಜೊತೆ ಸಂಪರ್ಕ ಹೊಂದಿದ್ದ ಎನ್ನುವ ಮಾಹಿತಿ ಲಭಿಸಿದೆ. ಅಷ್ಟೇ ಅಲ್ಲದೆ ಅಕ್ರಮ ಶಸ್ತ್ರಾಸ್ತ್ರ ಖರೀದಿ, ಸಾಗಣೆ ಕುರಿತು ಚರ್ಚಿಸಿದ್ದ ಎನ್ನುವ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. 2025 ಡಿಸೆಂಬರ್ನಿAದಲೇ ದೇಶವಿರೋಧಿ ಚಟುವಟಿಕೆಯಲ್ಲಿ ಈತ ಭಾಗಿಯಾಗಿದ್ದ ಎನ್ನಲಾಗಿದೆ. ಘಟನೆ ಸಂಬAಧ ಪಾಕ್ ಮೂಲದ ಶಹಜಾದ್ ಭಟ್ಟಿ ನೋಮಿ ಖಾನ್ ರಾನಾ ಹುನೈನ, ಯುಪಿ ಮೂಲದ ಅಶು ಶರ್ಮಾ, ಮಧ್ಯಪ್ರದೇಶದ ರಾಜೀವ್ ಭಾಯ್ ಸೇರಿ ಏಳು ಆರೋಪಿಗಳ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
