Share this news

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿತವಾಗಿರುವ ಆರ್​. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ  ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ.

ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.

ಶಾಸಕ ಮುನಿರತ್ನ ಸೆಪ್ಟೆಂಬರ್​ 9 ರಂದು 20 ಲಕ್ಷ ರೂಪಾಯಿ ಹಣ ಕೇಳಿದ್ದರು. ದುಡ್ಡು ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಆದರೆ, ಅಷ್ಟರಲ್ಲಾಗಲೇ ಮುನಿರತ್ನ ನಾಪತ್ತೆಯಾಗಿದ್ದರು.

 

 

 

 

 

 

 

 

    

                       in 

                          

                        

                       

Leave a Reply

Your email address will not be published. Required fields are marked *