Share this news

ಕಾರ್ಕಳ: ಅಂಗನವಾಡಿ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇಲೆ ಅಮಾನತುಗೊಂಡ ಕುಕ್ಕುಂದೂರು ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಎಂಬವರನ್ನು ಮತ್ತೆ ಕರ್ತವ್ಯಕ್ಕೆ ಸೇರ್ಪಡೆ ಮಾಡಲಾಗಿದೆ.ಈ ಕುರಿತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾರ್ಯಕರ್ತೆ ಅಮಾನತು ಆದೇಶ ಹಿಂಪಡೆದಿದ್ದಾರೆ.

ಪ್ರಭಾವತಿಯವರು ಅಂಗನವಾಡಿ ಕಟ್ಟಡದ ಹೆಚ್ಚುವರಿ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡದೇ ಕಟ್ಟಡವನ್ನು ಉದ್ಘಾಟಿಸಿದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಇಲಾಖೆಯ ಉಪನಿರ್ದೇಶಕರಿಗೆ ದೂರು ನೀಡಲಾಗಿತ್ತು.ಇದರ ಕುರಿತು ತನಿಖೆ ನಡೆಸಿದ ಉಪನಿರ್ದೇಶಕರು ಕರ್ತವ್ಯಲೋಪದ ಆರೋಪದ ಮೇರೆಗೆ ಕಾರ್ಯಕರ್ತೆ ಪ್ರಭಾವತಿ ಅವರನ್ನು ಅಮಾನತುಗೊಳಿಸಿದ್ದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಡಿಪಿಓ ಭಾಗಿಯಾಗಿದ್ದು ಅವರಿಗೂ ಈ ವಿಚಾರ ಗಮನಕ್ಕೆ ಬಂದಿತ್ತು.ಆದರೆ ಅವರನ್ನು ಅಮಾನತು ಮಾಡದೇ ಕಾರ್ಯಕರ್ತೆಯನ್ನು ಬಲಿಪಶು ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಹಾಗೂ ಕಾರ್ಯಕರ್ತೆಯ ಅಮಾನತಿಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು

                       in 

                          

                        

                       

Leave a Reply

Your email address will not be published. Required fields are marked *