

ಕಾರವಾರ, ಆ. 26: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲ ಮುಸ್ಲಿಂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ. ಮೆರವಣಿಗೆಯಲ್ಲಿದ್ದ ಕೆಲವು ಯುವಕರು ಪ್ಯಾಲೆಸ್ಟೈನ್ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಪರಿಸ್ಥಿತಿಯನ್ನು ತಿಳಿಗೊಳಿಸಿದ ಪೊಲೀಸರು, ಇಂತಹ ಧ್ವಜಗಳನ್ನು ಹಾರಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟರು.





.
.
.
.
.
.
.
.
.
.
.
.
.
.
.
.
.
.
.
.
