Share this news

ಬೆಂಗಳೂರು: ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಅವುಗಳನ್ನು ಜಾರಿ ಮಾಡಿದೆ. ಆದರೆ, ಯೋಜನೆ ಜಾರಿಗೆ ಬಂದು ವರ್ಷ ಆಗುತ್ತಿದ್ದಂತೆಯೇ ಒಂದೊAದು ಯೋಜನೆಗಳಿಗೆ ಅದ್ಯಾಕೋ ಗ್ರಹಣ ಬಡಿದಂತಾಗುತ್ತಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿದ್ದ 2,000 ರೂ. ಎರಡು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ವರ್ಗವಾಗಿಲ್ಲ. ಇದೀಗ ಅನ್ನಭಾಗ್ಯದ ಹಣ ಕೂಡ 2 ತಿಂಗಳಿನಿAದ ಬಂದಿಲ್ಲ ಅಂತ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿಯ ಕೊರತೆ ಕಾರಣ ನೀಡಿ ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರಕಾರ ಫಲಾನುಭವಿಗಳ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿನಿಂದ ಹಣ ಪಾವತಿಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು ಒನ್ ಹಾಗೂ ಬ್ಯಾಂಕ್ ಗಳನ್ನ ಸುತ್ತುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಆಸೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸ್ವಲ್ಪ ದಿನ ಕೊಟ್ಟು ಜನರಿಗೆ ಮೋಸ ಮಾಡಿದ್ದಾರೆ. ಸರ್ಕಾರ ಕೊಡುವ ದುಡ್ಡನ್ನು ನಂಬಿ ನಾವು ಜೀವನ ಮಾಡುತ್ತಿಲ್ಲ. ಆದರೆ ಕೊಡುತ್ತೇವೆ ಎಂದು ಮೋಸ ಮಾಡಿದರು ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

                       in 

                          

                        

                       

Leave a Reply

Your email address will not be published. Required fields are marked *