Share this news

ಬೆಂಗಳೂರು, ಅಕ್ಟೋಬರ್ 09:ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಇಂದಿರಾ ಕಿಟ್‌ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮಾಡಲಾಗುತ್ತದೆ.

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಕುಟುಂಬದ ತಲಾ ಒಬ್ಬರಿಗೆ 10 ಕೆಜಿ ಅಕ್ಕಿ ಘೋಷಣೆ ಮಾಡಿತ್ತು. ಆರಂಭದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲ ಎಂದು  5 ಕೆಜಿ ಅಕ್ಕಿ ನೀಡಿ, ಉಳಿದ 5 ಕೆಜಿ ಅಕ್ಕಿಯ ಹಣವನ್ನು ಫಲಾನುಭವಿ ಕುಟುಂಬದ ಯಜಮಾನರ ಖಾತೆಗೆ ಜಮೆ ಮಾಡುತ್ತಿತ್ತು. ಆ ಬಳಿಕ ಅಕ್ಕಿ ದಾಸ್ತಾನು ಲಭ್ಯವಾದ ಹಿನ್ನೆಲೆ ತಲಾ 10 ಕೆಜಿ ನೀಡುತ್ತಿತ್ತು. ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆಹಾರ ಕಿಟ್‌ ನೀಡಲು ತೀರ್ಮಾನಿಸಲಾಗಿದೆ.ಇಂದಿರಾ ಆಹಾರ ಕಿಟ್‌ನಲ್ಲಿ ತೊಗರಿಬೆಳೆ, ಅಡುಗೆ ಎಣ್ಣೆ, ಉಪ್ಪು ಮತ್ತು ಸಕ್ಕರೆ ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳ ಸಾಗಾಟವಾಗುತ್ತಿದ್ದ ಹಿನ್ನೆಲೆ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇನ್ನುಳಿದAತೆ ಸಚಿವ ಸಂಪುಟ ಸಭೆಯಲ್ಲಿ 2025-26ನೇ ಸಾಲಿನ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ. ಸಾಲಕ್ಕೆ ಬಂಡವಾಳ ಖಾತ್ರಿ ನೀಡುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಜಲಾನಯನ ಅಭಿವೃದ್ಧಿ ಘಟಕ, ಪ್ರಧಾನಮಂತ್ರಿ ಕೃಷಿ ಸಿಂಚಯಿ ಹೆಚ್ಚುವರಿ 15 ಯೋಜನೆಗಳು 15 ತಾಲೂಕುಗಳಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ದೊರೆತಿದೆ. 5ನೇ ರಾಜ್ಯ ಹಣಕಾಸು ಆಯೋಗದ ಅವಧಿಯನ್ನು ವಿಸ್ತರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ನವೆಂಬರ್ ತನಕ ಅವಧಿ ವಿಸ್ತರಣೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎರಡನೇ ಹಂತದಲ್ಲಿ 11 ಶ್ರಮಿಕ ವಸತಿ ಶಾಲೆಗಳನ್ನು ರೂ.405.55 ಕೋಟಿ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2025 ಅನುಮೋದನೆ ಸಿಕ್ಕಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *