ಕಾರ್ಕಳ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ 43ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಂಜುನಾಥ ಪೈ ಸಭಾಭವನದಲ್ಲಿ ನಡೆಯಿತು. ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ತಾಲೂಕು ಪಂಚಾಯತ್ ಮ್ಯಾನೇಜರ್ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯನಾರಾಯಣ ನಾಯ್ಕ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ಸಹಾಯಕಿಯರು ಮಾಡುತ್ತಿರುವ ಕೆಲಸವು ಸಮಾಜ ಸೇವೆಯಾಗಿರುತ್ತದೆ ಈ ಸೇವೆಯನ್ನು ದಕ್ಷತೆ,ಪ್ರಾಮಾಣಿಕತೆ ನಿಷ್ಠೆಯಿಂದ ನಿರ್ವಹಿಸುವಂತೆ ಕಿವಿಮಾತು ಹೇಳಿದರು. ಈ ಕಾರ್ಯಕ್ರಮದಲ್ಲಿ ನಿವೃತ್ತ ಮೇಲ್ವಿಚಾರಕಿ ಸುಮಿತ್ರಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಹಿರಿಯ ಮೇಲ್ವಿಚಾರಕಿ ರೇವತಿ ಹಾಗೂ ಮೇಲ್ವಿಚಾರಕೀಯರಾದ ವಸಂತಿ, ಉಮಾ, ಶಾಂಭವಿ, ಗುಣವತಿ ಶುಭ ಹಾರೈಸಿದರು. ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಕೆ ಪಿ ಪದ್ಮಾವತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಪದ್ಮಾವತಿ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತರಾದ ಸೌಭಾಗ್ಯ ಹಾಗೂ 15 ವರ್ಷಗಳಿಂದ ಸಂಘದ ಅಧ್ಯಕ್ಷೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಆಶೋತ್ತರಗಳಿಗೆ ಸ್ಪಂದಿಸಿ ಇದೀಗ ಸ್ವಯಂ ನಿವೃತ್ತಿ ಪಡೆದ ಪದ್ಮಾವತಿ ಅಮೀನ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಒಟ್ಟುಯ 111 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. 17 ಮಂದಿ ಕಾರ್ಯಕರ್ತೆ ಸಹಾಯಕಿಯರಿಗೆ ಆರೋಗ್ಯ ನಿಧಿ ಪರಿಹಾರ ನೀಡಲಾಯಿತು ನಿವೃತ್ತಿಗೊಂಡAತ ಒಂಬತ್ತು ಕಾರ್ಯಕರ್ತರಿಗೆ ಹಾಗೂ 11 ಸಹಾಯಕರಿಗೆ ಈ ಸಂದರ್ಭದಲ್ಲಿ ಗೌರವಿಸಲಾಯಿತು
ವಸಂತಿ ಕಾಡಂಬಳ ಸ್ವಾಗತಿಸಿ, ಸಂಘದ ಉಪಾಧ್ಯಕ್ಷೆ ಮಮತಾ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪದ್ಮಾವತಿ ಅಮೀನ್ ವಂದಿಸಿದರು ವನಿತಾ , ಸಾಕಮ್ಮ ಮತ್ತು ಯಶ ಕಾರ್ಯಕ್ರಮ ನಿರೂಪಿಸಿದರು.