

ಕಾರ್ಕಳ, ಸೆ. 23: ಬೆಳ್ಮಣ್ಣು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು ಸೆ. 22ರಂದು ಸಂಘದ ಅಧ್ಯಕ್ಷ ಶಿವಪ್ರಸಾದ್ ಅಧ್ಯಕ್ಷತೆಯಲ್ಲಿ ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಸಭಾಭವನದಲ್ಲಿ ನಡೆಯಿತು.
ಈ ಸಭೆಯಲ್ಲಿ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂತೋಷ್ ರಾವ್ ಹಾಗೂ ಕಾರ್ಕಳ ರಿಕ್ಷಾ ಚಾಲಕ ಮಾಲಕರ ಸಂಘದ ಉಪಾಧ್ಯಕ್ಷ ವಿಶ್ವನಾಥ್ ಭಂಡಾರಿ ಕೋಶಾಧಿಕಾರಿ ಹರೀಶ್ ದೇವಾಡಿಗ ಸಂಘಟನಾ ಕಾರ್ಯದರ್ಶಿ ಶಿವಾನಂದ ಪೂಜಾರಿ ಹಾಗೂ ಬೆಳ್ಮಣ್ಣು ರಿಕ್ಷಾ ಚಾಲಕ ಮಾಲಕರ ಸಂಘದ ಕಾರ್ಯದರ್ಶಿ ರಾಜೇಶ್ ಕುಮಾರ್ ಕೋಶಾಧಿಕಾರಿ ಅಶೋಕ್ ಕ್ಯೂ ಸೆಕ್ರೆಟರಿಗಳಾದ ಪ್ರಕಾಶ್ ಹಾಗೂ ಮಾರ್ಕ್ ಆಂಧ್ರದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೂ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಅನಾರೋಗ್ಯ ಪೀಡಿತರಿಗೆ ಸಹಾಯಧನ ನೀಡಲಾಯಿತು. ಈ ಸಭೆಯಲ್ಲಿ ಎಲ್ಲಾ ರಿಕ್ಷಾ ಚಾಲಕರು ಉಪಸ್ಥಿತರಿದ್ದರು





.
.
.
.
.
.
.
.
.
.
.
.
.
.
.
.
.
.
.
.
