Share this news

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ (ಮೇ.24) ತಡರಾತ್ರಿ ಈ ಘಟನೆ ನಡೆದಿದ್ದು, ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ

ಬ್ಯಾಂಕ್  ಕಳ್ಳತನವಾದ ಸುದ್ದಿ ತಿಳಿದು, ಸಿಬ್ಬಂದಿ, ಮನಗೂಳಿ ಠಾಣೆ ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

 

 

 

Leave a Reply

Your email address will not be published. Required fields are marked *