ಬೆಂಗಳೂರು: ಆಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಂದರ್ಭದಲ್ಲಿ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾದ ಬಳಿಕ ಟ್ವೀಟ್ ಡಿಲೀಟ್ ಮಾಡಿತ್ತು. ಇದೀಗ ಮತ್ತೆ ಕರ್ನಾಟಕ ಕಾಂಗ್ರೆಸ್‌ನಿAದ ಮತ್ತೊಂದು ಎಡವಟ್ಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್‌ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಂಡಿದೆ. ಪಾಕಿಸ್ತಾನಕ್ಕೆ ಐಎಂಎಫ್ ಲೋನ್ ನೀಡಿದ್ದನ್ನ ಟೀಕಿಸಿ ಪೋಸ್ಟ್ ಹಾಕಲಾಗಿದೆ.ಅದರಲ್ಲಿ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಅಷ್ಟರಲ್ಲಿ ಕರ್ನಾಟಕ ಕಾಂಗ್ರೆಸ್‌ನ ಎಡವಟ್ಟು ಡಿಸಿಎಂ ಡಿಕೆ ಶಿವಕುಮಾರ್ ಗೆ ತಿಳಿದಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.