ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ಎನ್‌ಐಎ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದೆ. ಐಸಿಸ್ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಇದೀಗ ಪೂರಕ ಚಾಜ್‌ಶೀಟ್ ಸಲ್ಲಿಕೆಯಾಗಿದೆ.ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಮುಸ್ಲಿಂ ಯುವಕರನ್ನು ಮೂಲಭೂತವಾದಿ ಚಟುವಟಿಕೆಗಳಿಗೆ ಸೆಳೆಯುವ ಕುರಿತು ಪ್ರಚೋದನೆ ನೀಡುತ್ತಿದ್ದರು. ಭಯೋತ್ಪಾದಕರಿಗೆ ಹಣಕಾಸು ನೆರವನ್ನೂ ನೀಡುತ್ತಿದ್ದರು ಎಂದು ಚಾರ್ಜ್ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ಸಲ್ಲಿಸಿರುವ ಮೂರನೇ ಪೂರಕ ಚಾರ್ಜ್ಶೀಟ್ ಇದಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ 10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದಂತಾಗಿದೆ.
ದೇಶದಲ್ಲಿ ಅಭದ್ರತೆ ಸೃಷ್ಟಿಸಲು ಸಂಚು
ಆರೋಪಿಗಳು ಭಯೋತ್ಪಾದನೆಯನ್ನು ಹರಡಲು ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸುವ ಐಎಸ್ ಪಿತೂರಿಯ ಭಾಗವಾಗಿ ಮೂಲಭೂತವಾದಿ ಚಟುವಟಿಕೆಗಳು, ಭಯೋತ್ಪಾದನೆಗೆ ಯುವಕರನ್ನು ಸೆಳೆಯುವುದು, ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು, ಸ್ಫೋಟ ಕೃತ್ಯ ಎಸಗುವುದು ಮತ್ತು ಭಾರತೀಯ ರಾಷ್ಟ್ರಧ್ವಜದ ದಹನದಂತಹ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿ ದೇಶದ ನಾಗರಿಕರಲ್ಲಿ ಭಯ ಸೃಸ್ಟಿಸಲು ಸಂಚು ರೂಪಿಸಿದ್ದರು ಎಂದು ಎನ್‌ಐಎ ಚಾರ್ಜ್ಶೀಟ್ ನಲ್ಲಿ ತಿಳಿಸಿದೆ.
in