

ಬೆಂಗಳೂರು,ನ.02 ; ಬಂಗಾಳ ಕೊಲ್ಲಿಯಲ್ಲಿ ‘ಅರ್ನಬ್’ ಚಂಡಮಾರುತದ ಬೆನ್ನಿಗೆ ‘ಮುರಾಸು’ ಎನ್ನುವ ಮತ್ತೊಂದು ಚಂಡಮಾರುತ ಸೃಷ್ಟಿಯಾಗಿದ್ದು ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಅಬ್ಬರ ತುಸು ಹೆಚ್ಚಾಗುವ ಸಾಧ್ಯತೆಯಿದ್ದು, ನಿರ್ದಿಷ್ಟವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
