ಉಡುಪಿ : ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ.
ಉಡುಪಿಯ ಪುತ್ತೂರಿನ ಸೆಲೂನ್ ನೌಕರ ಚರಣ್ ಎಂಬಾತ ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ ವಿಚಾರವಾಗಿ ಪ್ರವೀಣ್ ಹಾಗೂ ಆತನ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಈ ವೇಳೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಹಾಗೂ ಗ್ಯಾಂಗ್ ಚರಣ್ & ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಿದೆ.
ಈ ಪ್ರಕರಣದಲ್ಲಿ ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದ್ದು, ಈ ಘಟನೆ ಕುರಿತು ಉಡುಪಿ ನಗರ ಠಾಣೆಯ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.