Share this news

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ  ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ.

ರಸ್ತೆ ಬಂದ್ ಆಗಿರುವ ಪರಿಣಾಮ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಬಾಳೆಹೊನ್ನೂರು-ಕಳಸ ಸಂಪರ್ಕಿಸುವ ಮಹಲ್ಗೋಡು ಸೇತುವೆ ಮುಳುಗಿದೆ. ಭದ್ರಾ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಿದೆ. ಮಾಗುಂಡಿ ಗ್ರಾಮ ದ್ವೀಪದಂತಾಗಿದೆ. ಮಾಗುಂಡಿಯಿAದ ಹುಯಿಗೆರೆ, ಬಿಕ್ಕರಣೆ, ಮಣಬೂರು, ಸಾರಗೋಡು, ಕರಗಣೆ ಸಂಪರ್ಕ ಬಂದ್ ಆಗಿದೆ.

                        

                          

                        

                          

 

`

Leave a Reply

Your email address will not be published. Required fields are marked *