ಹಾಸನ : ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ಶಿರೂರು ಗುಡ್ಡ ಕುಸಿತದಲ್ಲಿ ಹಲವರು ಮೃತ ಪಟ್ಟಿದ್ದಾರೆ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಇದೀಗ ಮತ್ತೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ.
ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಮರುದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.ಇದೀಗ ಮತ್ತೆ ಗುಡ್ಡ ಕುಸಿದಿದ್ದು ಸಂಚಾರ ಸ್ಥಗಿತಗೊಂಡಿದೆ.


`