Share this news

ಬೆಂಗಳೂರು,ನ.19:ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ನಡೆಸುತ್ತಿರುವ ತನಿಖೆಯಲ್ಲಿ ರಾಜ್ಯದ IPS ಅಧಿಕಾರಿಯೊಬ್ಬರು ತಮ್ಮ ಇಬ್ಬರು ಪುತ್ರಿಯರಿಗೆ KAS ಹುದ್ದೆ ಕೊಡಿಸಲು ಮಧ್ಯವರ್ತಿ ಬಸವರಾಜ್ ಕನ್ನಾಳೆಗೆ 2 ಕೋಟಿ ರೂ. ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. 

KPSC ನೇಮಕಾತಿ ಹಗರಣದಲ್ಲಿ ಬಂಧಿತನಾಗಿರುವ ಪ್ರಮುಖ ಮಧ್ಯವರ್ತಿ ಬಸವರಾಜ್ ಕನ್ನಾಳೆ, ಜಾರಿ ನಿರ್ದೇಶನಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆಯಲ್ಲಿ ಈ ವಿಚಾರವನ್ನು ಬಯಲಿಗೆಳೆದಿದ್ದು, “ಕೆಎಎಸ್ ಸಂದರ್ಶನಕ್ಕೂ ಮುನ್ನವೇ ಅವರ ಇಬ್ಬರು ಹೆಣ್ಣುಮಕ್ಕಳಿಗೆ ಹುದ್ದೆ ಕೊಡಿಸುವ ಆಮಿಷವೊಡ್ಡಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ, ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಸೂಚನೆಯಂತೆ ತಾನು ಅಧಿಕಾರಿಯ ಮನೆಗೆ ತೆರಳಿ 2 ಕೋಟಿ ರೂ. ಸಂಗ್ರಹಿಸಿದ್ದಾಗಿ” ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ಕೆಎಎಸ್ ಸಂದರ್ಶನದ ವೇಳಾಪಟ್ಟಿ ಪ್ರಕಟಿಸುವ ಮುನ್ನ ನನ್ನನ್ನು ಸಂಪರ್ಕಿಸಿ, ಐಪಿಎಸ್ ಅಧಿಕಾರಿ ಎಂ.ವಿ. ಚಂದ್ರಕಾAತ್ ಅವರ ಮನೆಗೆ ತೆರಳಿ 2 ಕೋಟಿ ರೂ. ನಗದು ಸಂಗ್ರಹಿಸಿ ತರುವಂತೆ ಸೂಚಿಸಿದ್ದರು. ಅದರಂತೆ ಹಣ ಸಂಗ್ರಹಿಸಿ ಗಂಗ್ವಾರ್ ಅವರಿಗೆ ತಲುಪಿಸಿದ್ದೆ. ಚಂದ್ರಕಾAತ್ ಅವರ ಇಬ್ಬರು ಪುತ್ರಿಯರಿಗೆ ಕೆಎಎಸ್ ಸಂದರ್ಶನದಲ್ಲಿ ಹೆಚ್ಚಿನ ಅಂಕಗಳನ್ನು ನೀಡಲು ಈ ಮುಂಗಡ ಹಣವನ್ನು ಪಡೆಯಲಾಗಿತ್ತು ಹಾಗೂ ಇದನ್ನು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹಸ್ತಾಂತರಿಸಬೇಕಿತ್ತು ಎಂದು ಗಂಗ್ವಾರ್ ತಿಳಿಸಿದ್ದಾಗಿ ಕನ್ನಾಳೆ ವಿವರಿಸಿದ್ದಾನೆ.

ಗಂಗ್ವಾರ್ ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದ ಪಿಡಿಒ (ಹೈ-ಕ), ಕಿರಿಯ ಅಭಿಯಂತರ (ಜೆಇ), ಕೃಷಿ ಅಧಿಕಾರಿ ಮತ್ತು ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಗಳಲ್ಲಿ ತಾನು ಶಿಫಾರಸು ಮಾಡಿದ ಅಭ್ಯರ್ಥಿಗಳಿಗೆ ಕೀ ಉತ್ತರಗಳನ್ನು ಒದಗಿಸಲಾಗಿತ್ತು ಎಂದು ಬಸವರಾಜ್ ಕನ್ನಾಳೆ ಸ್ಫೋಟಕ ಮಾಹಿತಿ ನೀಡಿದ್ದಾನೆ. ಗಂಗ್ವಾರ್ ಮತ್ತು ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಆಪ್ತರಾಗಿದ್ದು, ನೇಮಕಾತಿ ಅಕ್ರಮಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ. ತಾನು ಗಂಗ್ವಾರ್ ಅವರಿಗೆ ಸೇರಿದ ಸುಮಾರು 15 ಕೋಟಿ ರೂ. ಹಣವನ್ನು ನಿರ್ವಹಿಸಿದ್ದಾಗಿ ಬಸವರಾಜ ಕನ್ನಾಳೆ ಇ.ಡಿ ಮುಂದೆ ಬಿಚ್ಚಿಟ್ಟಿದ್ದಾನೆ ಎಂದು ಉನ್ನತ ಮೂಲಗಳು ತಿಳಿಸಿವೆ.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *