
ಗದಗ, ಜ.20 : ಗದಗದ ಲಕ್ಕುಂಡಿಯಲ್ಲಿ ಮನೆಯ ಪಾಯ ಅಗೆಯುತ್ತಿದ್ದ ವೇಳೆ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಭಾಗದಲ್ಲಿ ಉತ್ಖನನಕ್ಕೆ ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ಖನನ ಕಾರ್ಯ ನಡೆಯುತ್ತಿದೆ. ಈ ವೇಳೆ ಹಲವು ಶಿಲಾ ಶಾಸನಗಳು, ದೇವರ ಮೂರ್ತಿಗಳು ಹಾಗೂ ಪುರಾತನ ವಸ್ತುಗಳು ಪತ್ತೆಯಾಗಿವೆ. ಇದೀಗ ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ವಾಸಿಸುತ್ತಿದ್ದ ಮನೆಯೊಳಗೆ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದು, ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ.

.
.
.
.
