ಬೆಂಗಳೂರು: ಈಗಾಗಲೇ ದಲಿತ ವ್ಯಕ್ತಿಗೆ ನಿಂದನೆ ಹಾಗೂ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿದ್ದು ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೇ ಕೋಟ್ಯಾಂತರ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಕಾರಣ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ಇದೀಗ ತನಿಖೆಗೆ ಸಮಿತಿ ರಚಿಸಿ ಆದೇಶಿಸಲಾಗಿದೆ.
ಹಾಗಾಗಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ಆರ್?ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದೆ. ಈ ಪ್ರಕರಣದಿಂದ ಶಾಸಕ ಮುನಿರತ್ನಗೆ ಕಾನೂನು ಉರುಳು ಮತ್ತಷ್ಟು ಬಿಗಿಯಾಗಲಿದೆ.







in 
