Share this news

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲರು ಚಿಂತನೆ ನಡೆಸಿದ್ದಾರೆ. ಇದರ ನಡುವೆ ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಟಿಜೆ ಅಬ್ರಾಹಂ ಅವರು ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ನೀಡಿದ್ದಾರೆ.

ಇದೇ ಮುಡಾ ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರ್ಕಾರ ಸಹ ನೋಟಿಸ್​ ವಾಪಸ್ ಪಡೆದುಕೊಂಡು ಅಬ್ರಾಹಂ ಅವರ ದೂರು ತಿರಸ್ಕರಿಸಬೇಕೆಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದೆ. ಹೀಗಾಗಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ಇಲ್ಲ ಎನ್ನುವ ಕುತೂಹಲ ಮೂಡಿಸಿದೆ.

ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದು, ನಾಳೆ (ಆಗಸ್ಟ್ 13) ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸಬೇಕೋ ಬೇಡ್ವಾ ಎನ್ನುವ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ. ಇದರ ಮಧ್ಯ ಇದೀಗ ಅಬ್ರಾಹಂ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *