
ಕಾರ್ಕಳ,ಫೆ.17: ಕಾರ್ಕಳದ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇಲ್ಲಿಗೆ ಭೇಟಿ ನೀಡಿದ ಸಂದರ್ಭ ಶಾಲೆಯ ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಆಶಾ ಭಾನು, SDMC ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಕೌಡೂರು ಗ್ರಾ.ಪಂ. ಉಪಾಧ್ಯಕ್ಷ ಸಂತೋಷ್, ಜಿ.ಪಂ. ನಿಕಟಪೂರ್ವ ಸದಸ್ಯ ಸುಮಿತ್ ಶೆಟ್ಟಿ ಕೌಡೂರು, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಗುತ್ತುಮನೆ, ಹಿರಿಯ ವಿದ್ಯಾರ್ಥಿ ಸುಬ್ರಮಣ್ಯ ದೇವಾಡಿಗ ಹಾಗೂ ಶಿಕ್ಷಕ ವೃಂದದವರು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲೆಯ ಮನವಿಗೆ ಸ್ಪಂದಿಸಿದ ಶಾಸಕರು, ಶಾಲೆಯ ಏಳಿಗೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

.
.
.
.
.
.
.
.
.
.
