ಬೆಂಗಳೂರು,18: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆ ಪಾಸಾದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ಸರ್ಕಾರವು ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿದೆ.
ದೀಪಾವಳಿ ಸಂದರ್ಭದಲ್ಲಿ ಶಿಕ್ಷಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆಗೆ(TET) ಅರ್ಜಿ ಆಹ್ವಾನಿಸಿದೆ.
ಈ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿದೆ. ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅ.23 ರಿಂದ ಅರ್ಜಿ ಸಲ್ಲಿಕೆಗೆ ಆರಂಭವಾಗಲಿದ್ದು, ನ.,09 ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಾಗಿದೆ ಎಂದಿದ್ದಾರೆ. ಡಿ.07 ರಂದು ಅರ್ಹತಾ ಪರೀಕ್ಷೆ ನಡೆಯಲಿದ್ದು, ಡಿ. 3 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.