ಬೆಂಗಳೂರು: ಸಿ.ಟಿ ರವಿಯವರ ಬಂಧನ ಪ್ರಕರಣದ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಜೆಡಿಎಸ್ ಹಿಗ್ಗಾಮುಗ್ಗಾ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ವಾಗ್ಧಾಳಿ ನಡೆಸಿದೆ. ನೀವು ಕರ್ನಾಟಕದ ಜವಾಬ್ದಾರಿಯುತ ಉಪಮುಖ್ಯಮಂತ್ರಿಯೋ ಅಥವಾ ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ. ಎಂದು ಪ್ರಶ್ನಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಕೊಲೆಗೆ ಪರೋಕ್ಷವಾಗಿ ಕುಮ್ಮಕ್ಕು ಕೊಡುತ್ತಿರುವ ನೀನು ಯಾವ ಸೀಮೆ ಉಪಮುಖ್ಯಮಂತ್ರಿ ಎಂದು ಕಿಡಿಕಾರಿದೆ. ರೌಡಿ ಕೊತ್ವಾಲ್‌ನ ಶಿಷ್ಯ ಡಿ.ಕೆ ಶಿವಕುಮಾರ್ ಬೆಳೆದು ಬಂದಿರುವ ಕರಾಳ ಇತಿಹಾಸವೇ ಇಂತಹದ್ದು. ಕೊಲೆಗೆ ಯತ್ನ ಸ್ವಾಭಾವಿಕ ಎಂದು ಹೇಳಿಕೆ ನೀಡಿರುವ ನೀನು ರಾಜಕಾರಣಿಯೋ ? ರೌಡಿಯೋ..? ರಾಜ್ಯ ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದೆ.
