ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆಯನ್ನು ನಡೆಸಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಅನೇಕ ಎನ್‌ಕೌಂಟರ್‌ಗಳು ಹೆಚ್ಚಾಗಿವೆ.