Share this news

ಉಡುಪಿ, ಆ.31:ಕೊಲೆ ,ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು 14 ವರ್ಷಗಳ ಬಳಿಕ ಪಡುಬಿದ್ರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮೈಸೂರಿನ ನಿವಾಸಿ ಇಕ್ಬಾಲ್ ಅಹಮ್ಮದ್ ಅನ್ಸಾರಿ ಎಂಬಾತ ಬಂಧಿತ ಅರೋಪಿ. ಈತ ವಿದೇಶದಿಂದ ವಾಪಾಸು ಬರುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಬೆಂಗಳೂರಿಗೆ ಬಂದಿಳಿಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ.
ಭಾಗಿಯಾಗಿದ್ದ.ಈತನ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಸಿಕೊಂಡಿದ್ದ.
ಕುಖ್ಯಾತ ಕಳ್ಳರಾದ ಮುತ್ತಪ್ಪ ಬಳೆಗಾರ ಮತ್ತು ಸುದರ್ಶನ ಬಳೆಗಾರ ಎಂಬವರು ಕಳೆದ 2010ರ ಜ.22 ರಂದು ಕಾಪು ತಾಲೂಕು ನಂದಿಕೂರು ಗ್ರಾಮದ ರಾಘವೇಂದ್ರ ಭಟ್ ಎಂಬವರ ಮನೆಯ ಹಿಂಬದಿಯ ಬಾಗಿಲನ್ನು ಮುರಿದು ಒಳ ಪ್ರವೇಶಿಸಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಎಲೆಕ್ಟ್ರಾನಿಕ್ ಸ್ವತ್ತುಗಳನ್ನು ಕಳವು ಮಾಡಿಕೊಂಡು ಹೋಗಿ ಅದರಲ್ಲಿ ಚಿನ್ನಾಭರಣಗಳನ್ನು ಮೈಸೂರಿನ ಮಹಮ್ಮದ್ ಇಕ್ಬಾಲ್ ಅನ್ಸಾರಿ ಎಂಬಾತನಲ್ಲಿ ಕೊಟ್ಟು ಮಾರಾಟ ಮಾಡಿದ್ದರು.ಇದಲ್ಲದೇ ಮುತ್ತಪ್ಪ ಬಳೆಗಾರ ಮತ್ತು ಸುದರ್ಶನ ಬಳೆಗಾರ ಮೈಸೂರಿನ ರಿಯಾಜ್ ಅಹಮದ್ ಎಂಬಾತನ ಜೊತೆ ಸೇರಿ 2010ರಲ್ಲಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಶಿವರಾಯ ಆಚಾರ್ಯ(70) ಎಂಬವರನ್ನು ಕೊಲೆ ಮಾಡಿ ಅವರ ಮೈ ಮೇಲಿನ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಶಿರ್ವ ಹಾಗೂ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಹಗಲು ಹೊತ್ತಲ್ಲೇ 3 ಮನೆ ಕಳ್ಳತನ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1 ಹಗಲು ಮನೆ ಕಳ್ಳತನ ಮಾಡಿದ್ದು ಸದರಿ ಪ್ರಕರಣಗಳಲ್ಲಿ ಕಳವು ಮಾಡಿದ ಚಿನ್ನಾಭರಣಗಳನ್ನು ಮೈಸೂರಿನ ಇಕ್ಬಾಲ್ ಅಹಮದ್ ಅನ್ಸಾರಿ ಮೈಸೂರಿನಲ್ಲಿ ಚಿನ್ನದ ಅಂಗಡಿಯಲ್ಲಿ ಮಾರಾಟ ಮಾಡಿದ್ದರು. ಬಳಿಕ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನಂತರ ಇಕ್ಬಾಲ್ ಅಹಮದ್ ಅನ್ಸಾರಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆ ಸಮಯ ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆತನ ಬಂಧನಕ್ಕೆ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.ಶನಿವಾರ ಬಂಧಿತ ಇಕ್ಬಾಲ್ ಅಹಮ್ಮದ್ ಅನ್ಸಾರಿಗೆ ಉಡುಪಿ ಜಿಲ್ಲಾ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧಿಕ್ಷಕ ಹರಿರಾಮ್ ಶಂಕರ IPS ರವರ ಆದೇಶದಂತೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸದಾನಂದ ಎಸ್ ನಾಯಕ್ ರವರ ಮಾರ್ಗದರ್ಶನದಂತೆ ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾI ಹರ್ಷ ಪ್ರಿಯಂವದಾ ಮತ್ತು ಕಾಪು ವೃತ್ತ ನಿರೀಕ್ಷಕ ಜಯಶ್ರೀ ಮಾನೆ ರವರ ನೇತೃತ್ವದಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕ ಸಕ್ತಿವೇಲು, ಅನಿಲ್ ಕುಮಾರ್(ತನಿಖೆ) ಸಿಬ್ಬಂದಿಗಳಾದ ಎ ಎಸ್ ಐ ರಾಜೇಶ್ ಪಿ, ಕಾನ್ಸ್ಟೇಬಲ್ ಗಳಾದ ಸಂದೇಶ, ಶರಣ್ ಜೆ ಪುತ್ರನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಈ ಮೇಲಿನ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಮುತ್ತಪ್ಪ ಬಳೆಗಾರ ಮತ್ತು ಮೈಸೂರಿನ ರಿಯಾಜ್ ಅಹಮದ್ ಉಡುಪಿ ಜಿಲ್ಲಾ ಕಾರಾಗೃಹ ದಲ್ಲಿ ನಡೆದ ವಿನೋದ್ ಶೆಟ್ಟಿಗಾರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಪ್ರಸ್ತುತ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *