ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳಾದ ಇಲ್ತಾಜ್, ಮುನಾವರ್ ಹಾಗೂ ಮೊಹಮ್ಮದ್ ನಾಶಿಪುಡಿ ಅವರನ್ನು ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು FSL ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.