
ಬೆಂಗಳೂರು,ಮೇ.02: ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿಯವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಏಪ್ರಿಲ್ 15ರಿಂದಲೇ ಅನ್ವಯವಾಗುವಂತೆ ಅನರ್ಹತೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳ ಅನ್ವಯ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ವಿನಯ ಕುಲಕರ್ಣಿ ಈಗಾಗಲೇ ಹೈಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.


.
.
.
.
.
.
.
.
.
.
.
.
.
.
.
.
.
.
.
.
