

ಕಾರ್ಕಳ,ನ. 01:ತ್ಯಾಗಮೂರ್ತಿ ಭಗವಾನ್ ಬಾಹುಬಲಿಯ ಮಹಾಮಜ್ಜನಕ್ಕೆ ಕಾರ್ಕಳ ಮತ್ತೊಮ್ಮೆ ಸಜ್ಜಾಗಿದ್ದು,ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ಈಗಾಗಲೇ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದೆ.
ಮಹಾಮಸ್ತಕಾಭಿಷೇಕದ ಸಲುವಾಗಿ ಪ್ರಮುಖ ಅಂಗವಾಗಿ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಸಲು ಅಟ್ಟಳಿಗೆ ನಿರ್ಮಾಣ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಭಾನುವಾರ ಬೆಳಿಗ್ಗೆ ಬಾಹುಬಲಿ ಬೆಟ್ಟದಲ್ಲಿ ಬಾಹುಬಲಿ ಸ್ವಾಮಿಗೆ ಪಾದಪೂಜೆ ನೆರವೇರಿಸಿದ ನಂತರ ಬೆಟ್ಟದಲ್ಲಿ ಅಟ್ಟಳಿಗೆ ಮುಹೂರ್ತ ಕಾರ್ಯಕ್ರಮವು ಪ್ರಸಂಗಸಾಗರ ಮುನಿಮಹಾರಾಜರ ಪಾವನ ಸಾನಿಧ್ಯದಲ್ಲಿ , ಕಾರ್ಕಳ ಜೈನ ಮಠದ ಮತ್ತು ಸೊಂದಾ ಜೈನ ಮಠದ ಪೂಜ್ಯ ಸ್ವಾಮೀಜಿಗಳರವರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಡಾ ಎಂ .ಎನ್ ರಾಜೇಂದ್ರ ಕುಮಾರ್, ಶಾಸಕ ವಿ ಸುನೀಲ್ ಕುಮಾರ್, ಮಾಜಿ ಸಚಿವರಾದ ಕೆ ಅಭಯಚಂದ್ರ ಜೈನ್, ಪಡುಬಿದ್ರೆ ಬೀಡು ರತ್ನಾಕರ ರಾಜ್ ಅರಸು ಕಿನ್ಯಾಕ್ಕ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಮಂಗಳೂರು, ಕೋಶಾಧಿಕಾರಿ ಎ ಮೋಹನ್ ಪಡಿವಾಳ್, ಸಮಿತಿಯ ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ಜೊತೆ ಕಾರ್ಯದರ್ಶಿಗಳು, ಉಪ ಸಮಿತಿಗಳ ಎಲ್ಲಾ ಪದಾಧಿಕಾರಿಗಳು, ಶ್ರಾವಕ ಶ್ರಾವಕಿ ಬಂಧುಗಳು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
