ಬೆಳಗಾವಿ : ಬೆಳಗಾವಿಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಸಿ ಆಕೆಯೊಂದಿಗೆ ಪ್ರೀತಿ ನಾಟಕವಾಡಿ, ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮುಸ್ಲಿಂ ದಂಪತಿಯನ್ನು ಬಂಧಿಸಿದ್ದಾರೆ.ಬೆಳಗಾವಿಯಲ್ಲಿ ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಿಸಿ ಪ್ರೀತಿ ನಾಟಕವಾಡಿ ಮತಾಂತರ ಮಾಡಲು ಮುಂದಾದ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿಯ ಸವದತ್ತಿ ಠಾಣಾ ವ್ಯಾಪ್ತಿಯಲ್ಲಿ ಲವ್ ಜಿಹಾದ್ ಪ್ರಕರಣ ನಡೆದಿದೆ. ಹಿಂದೂ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಗಂಡ ಹೆಂಡತಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮತಾಂತರ ಮಾಡಲು ಯತ್ನಸಿದ ರಫೀಕ್ ಬೇಪಾರಿ ಹಾಗೂ ಆತನ ಪತ್ನಿ ಕೌಸರ್ ಬೇಪಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾ ಶಂಕರ್ ಗುಳೇದ ಅವರು ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಮಹಿಳೆಯಿಂದ ಒಟ್ಟು 7 ಜನರ ವಿರುದ್ಧ ಮತಾಂತರದ ಆರೋಪ ಮಾಡಿದ್ದಳು. ಸವದತ್ತಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಳು. ಮಹಿಳೆ ದೂರಿನನ್ವಯ ಸವದತ್ತಿ ಪೊಲೀಸರು ಮುಸ್ಲಿಂ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಹಿಂದೂ ಮಹಿಳೆಯ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡೋದಾಗಿ ಬೆದರಿಸಿ ಮತಾಂತರಕ್ಕೆ ಯತ್ನ ಮಾಡಲಾಗಿದೆ.
ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು. ಹಿಂದೂ ಸಂಪ್ರದಾಯ ಬಿಡಬೇಕು. ನಿತ್ಯ ಬುರ್ಖಾ ಧರಿಸಬೇಕು. ದಿನಕ್ಕೆ 5 ಸಲ ನಮಾಜ್ ಮಾಡಬೇಕು ಎಂದು ರಫೀಕ್ ಬೇಪಾರಿ ಕಂಡಿಷನ್ ಹಾಕಿದ್ದನು. ಇದಕ್ಕೆ ರಫೀಕ್‌ನ ಹೆಂಡತಿ ಮತ್ತು ಅಕ್ಕಪಕ್ಕದ ಮನೆ ರಫೀಕ್ ನೀಡಿದ ಕಿರುಕುಳದ ಬಗ್ಗೆ ತನ್ನ ಪತಿಗೆ ಮಹಿಳೆ ಮಾಹಿತಿ ನೀಡಿದ್ದಳು. ಇದೇ ಏ.18 ರಂದು ಸವದತ್ತಿ ಠಾಣೆಗೆ ದೂರು ನೀಡಿಲಾಗಿದೆ. ಆರೋಪಿಗಳಾದ ಮುನವಳ್ಳಿ ಪಟ್ಟಣದ ಆರೀಫ್ ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗ ಇಬ್ಬರನ್ನು ಬಂಧಿಸಿ, ಉಳಿದವರಿಗಾಗಿ ಬಲೆ ಬೀಸಲಾಗಿದೆ.
ಹಿಂದೂ ಸಂಘಟನೆಗಳು ಈ ಘಟನೆಯನ್ನು ಖಂಡಿಸಿದ್ದು ಇದು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ